ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಈಗ ಜೈಲಿನಲ್ಲಿ ಕೃಷಿ ಕೂಲಿ ಕೆಲಸಗಾರ!ರೇ* ಕೇಸ್ ನಲ್ಲಿ ಅಪರಾಧಿ ಆಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ಹಾಸನದ ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ, ಜೈಲಿನಲ್ಲಿ ಈಗ ತಾನು ಕೃಷಿ ಕೆಲಸ ಮಾಡುತ್ತೇನೆ. ಜೊತೆಗೆ ಅಡ್ಮಿನಿಸ್ಟ್ರೇಟೀವ್ ಕೆಲಸಗಳನ್ನು ಮಾಡುತ್ತೇನೆ ಎಂದು ಜೈಲು ಅಧಿಕಾರಿಗಳಿಗೆ ಹೇಳಿದ್ದಾರೆ. ಹೀಗಾಗಿ ಈಗ ಪ್ರಜ್ವಲ್ , ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೃಷಿ ಕೂಲಿ ಕೆಲಸಗಾರ. ಜೊತೆಗೆ ಅಡ್ಮಿನಿಸ್ಟ್ರೇಟಿವ್ ಕೆಲಸಗಳ ಕೂಲಿ ಕೆಲಸಗಾರ.