ಬೆಂಗಳೂರಿನಲ್ಲಿ ಸಾರ್ವಜನಿಕರ ಅನುಕೂಲ, ಸುರಕ್ಷತೆ ದೃಷ್ಟಿಯಿಂದ ಪಾದಚಾರಿ ಮೇಲ್ಸೇತುವೆಗಳಲ್ಲಿ ಆಗಸ್ಟ್ 25ರಂದು ಸಂಜೆ 5 ಗಂಟೆಗೆ ಸ್ವಚ್ಚತಾ ಕಾರ್ಯ ನಡೆಸಲಾಯಿತು. ಸಂಚಾರ ದಟ್ಟಣೆ ಹೆಚ್ಚಿರುವ ಕಡೆ ರಸ್ತೆಯ ಒಂದು ಬದಿಯಿಂದ ಮತ್ತೊಂದು ಬದಿಗೆ ನಾಗರಿಕರು ಸುಗಮವಾಗಿ ಚಲಿಸಬೇಕೆಂಬ ಉದ್ದೇಶದಿಂದ, ಪಾದಚಾರಿಗಳ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಜನನಿಬಿಡ ಪ್ರದೇಶ, ಪ್ರಮುಖ ಜಂಕ್ಷನ್, ಬಸ್ ನಿಲ್ದಾಣಗಳು ಸೇರಿದಂತೆ ಇನ್ನಿತರ ಕಡೆ 81 ಪಾದಚಾರಿ ಮೇಲ್ಸೇತುವೆಗಳನ್ನು ನಿರ್ಮಾಣ ಮಾಡಲಾಗಿದೆ. ಎಲ್ಲಾ 8 ವಲಯಗಳಲ್ಲಿ ಪಾದಚಾರಿ ಮೇಲ್ಸೇತುವೆಗಳಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಘನತ್ಯಾಜ್ಯ ನಿರ್ವಹಣೆ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಕರೀಗೌಡರವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.