ಸುದೀರ್ಘ ೩೫-೪೦ ವರ್ಷಗಳ ಹೋರಾಟದ ಫಲವಾಗಿ ಜನ ಸಂಖ್ಯೆ ಆಧಾರವಾಗಿ ಮೀಸಲಾತಿ ದೊರೆತಿದೆ. ಇದಕ್ಕೆ ರಾಜ್ಯ ಸರಕಾರವನ್ನು ಅಭಿನಂದಿಸುತ್ತೇನೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರು ಕಂಬದಹಳ್ಳಿಯಲ್ಲಿ ತಿಳಿಸಿದರು.ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಘೋಷಣೆ ನಂತರ ಮೊದಲ ಬಾರಿಗೆ ಹುಟ್ಟೂರು ಶಿಡ್ಲಘಟ್ಟದ ಕಂಬದಹಳ್ಳಿಗೆ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಆಗಮಿಸಿದ್ದು ದಲಿತ ಮುಖಂಡರ ಜತೆ ಸಮಾಲೋಚನೆ ನಡೆಸಿದರು.ಈ ವೇಳೆ ದೇವನಹಳ್ಳಿ, ಕೋಲಾರ ಸೇರಿದಂತೆ ನಾನಾ ಕಡೆಯಿಂದ ಆಗಮಿಸಿದ ದಲಿತ ಸಮುದಾಯದ ಮುಖಂಡರು ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ಸನ್ಮಾನಿಸಿ ಸಿಹಿ ಹಂಚಿ ಸಂಭ್ರಮಿಸಿದರು.