ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾಕ್ಟರ್ ಶರಣ ಪ್ರಕಾಶ ಪಾಟೀಲ್ ಅವರು ಬುಧವಾರ ರಾಯಚೂರು ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿ ರೈತರ ಬೆಳೆ ಹಾನಿ ವೀಕ್ಷಣೆ ಹಾಗೂ ರಾಯಚೂರು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಧಿಕಾರಿಗಳ ದಿನ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು ಜಿಲ್ಲಾ ಪ್ರವಾಸವನ್ನು ಅಕ್ಟೋಬರ್ ಮೂರರ ಶುಕ್ರವಾರಕ್ಕೆ ಮುಂದೂಡಲಾಗಿದೆ ಎಂದು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಅಕ್ಟೋಬರ್ ಮೂರರಂದು ನಡೆಯುವ ಅಧಿಕಾರಿಗಳ ಸಭೆಗೆ ಅಗತ್ಯ ಮಾಹಿತಿ ಹಾಗೂ ದಾಖಲಾತಿಗಳೊಂದಿಗೆ ಸಭೆಯಲ್ಲಿ ಭಾಗವಹಿಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.