ಗುಂಡ್ಲುಪೇಟೆ ತಾಲೂಕಿನಲ್ಲಿ ಅರಣ್ಯ ಪ್ರದೇಶ ಹೆಚ್ಚಿದ್ದು ಅರಣ್ಯ ಅಂಚಿನ ಗ್ರಾಮಗಳಿಗೆ ಹುಲಿ, ಚಿರತೆಗಳು ನುಗ್ಗಿ ಜನ ಜಾನುವಾರುಗಳ ಮೇಲೆ ದಾಳು ಮಾಡುವುದು ಸಾಮನ್ಯವಾಗಿದೆ ಜೀವ ಭಯದಲ್ಲಿರುವ ಜನರಿಗೆ ಅರಣ್ಯ ಇಲಾಖೆ ನೆರವು ನೀಡುತ್ತಿಲ್ಲ ಎಂದು ಆರೋಪಿಸಿ, ಹುಲಿ ಹಿಡಿಯಲು ಇಟ್ಟಿದ್ದ ಬೋನಿನಲ್ಲಿ ಸಿಬ್ಬಂದಿಗಳನ್ನು ರೈತರು ಕೂಡಿ ಹಾಕಿದರು. ಅರಣ್ಯ ಇಲಾಖೆ ಸಿಬ್ಬಂದಿಯನ್ನು ಬೋನ್ ನಲ್ಲಿ ಇರಿಸಿದ ಬಗ್ಗೆ ಮಾಹಿತಿ ಪಡೆದ ಗುಂಡ್ಲುಪೇಟೆ ವಲಯದ ಎಸಿಎಫ್ ಸುರೇಶ್ ಹಾಗೂ ಬಂಡೀಪುರ ವಲಯದ ಎಸಿಎಫ್ ನವೀನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದರು