ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ ತಕ್ಕಂತೆ ಲಭ್ಯವಾಗಲು ಕೃಷಿ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ. “ರೈತ ಕರೆ ಕೇಂದ್ರ” ಉನ್ನತೀಕರಣದ ಮಹತ್ವದ ಒಡಂಬಡಿಕೆಗೆ ವಿಕಾಸಸೌಧ ಕಚೇರಿಯಲ್ಲಿ ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಸಹಿ ಹಾಕಿದರು. ಸಚಿವ ಚಲುವರಾಯಸ್ವಾಮಿಯವರು ಕೃಷಿ ಇಲಾಖೆಯ ಅಧಿಕಾರ ವಹಿಸಿಕೊಂಡ ನಂತರ ರೈತರ ಅಭಿವೃದ್ಧಿ ರೈತ ಪರ ಕೆಲಸಕ್ಕೆ ಒತ್ತು ನೀಡಿದ್ದು, ಈಗಾಗಲೇ ರೈತ ಕರೆ ಕೇಂದ್ರಕ್ಕೆ ಆಧುನಿಕ ತಂತ್ರಜ್ಞಾನದ ಸ್ಫರ್ಶ ನೀಡಿರುವ ಸಚಿವರು, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡರು.