ಗ್ರಾಮೀಣ ಭಾಗದ ಜನರು ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯವನ್ನು ಕಪಾಡಿಕೊಳ್ಳಿ ಎಂದು ಕಾನ್ಶಿರಾಂ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಾಸು ಹೊಂಡರಬಾಳು ಸಲಹೆ ನೀಡಿದರು. ದೊಡ್ಡರಾಯಪೇಟೆ ಗ್ರಾಮದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಬೃಹತ್ ಆರೋಗ್ಯ ಉಚಿತ ತಪಾಸಣಾ ಶಿಬಿರದಲ್ಲಿ ಗುರುವಾರ ಮಾತನಾಡಿದರು. ಆರೋಗ್ಯ ತಪಾಸಣಾ ಶಿಬಿರದಲ್ಲಿ ಕುಡ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡರಾಯಪೇಟೆ, ಬೂದಿತಿಟ್ಟು ಹಾಗೂ ಇನ್ನಿತರೆ ಹಲವು ಗ್ರಾಮಗಳಿಂದ 486 ಜನರು ಭಾಗವಹಿಸಿ ವಿವಿಧ ತಪಾಸಣೆಗಳನ್ನು ಮಾಡಿಸಿಕೊಂಡರು. ಸುಮಾರು 20 ಕ್ಕಿಂತಲೂ ಹೆಚ್ಚು ಜನರನ್ನು ಕಣ್ಣಿನ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದರು.