ಗುಬ್ಬಿ ರೈಲ್ವೆ ಸ್ಟೇಷನ್ ಯಾರ್ಡ್‌ನಲ್ಲಿ ಲಘು ರಸ್ತೆ ಮೇಲ್ಸೇತುವೆ ಕಾಮಗಾರಿಗೆ ಶನಿವಾರ ಮಧ್ಯಾಹ್ನ 2 ಗಂಟೆಯಲ್ಲಿ ರಾಜ್ಯ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, "ತುಮಕೂರು ಜಿಲ್ಲೆಯ ಜನರ ಬಹುಕಾಲದ ಕನಸು ನನಸಾಗುತ್ತಿದೆ. ಜಿಲ್ಲೆಗೆ ಸಂಬಂಧಪಟ್ಟಂತೆ ಹಲವು ಯೋಜನೆಗಳು ಈಗಾಗಲೇ ಪ್ರಗತಿಯಲ್ಲಿವೆ. ಜನರು ನೀಡಿದ ಬೆಂಬಲದ ಮತದ ಋಣ ತೀರಿಸಲು ಇದು ಒಂದು ಉತ್ತಮ ಅವಕಾಶವಾಗಿದೆ" ಎಂದು ತಿಳಿಸಿದರು. ಅದೇ ಸಂದರ್ಭದಲ್ಲಿ ಗುಬ್ಬಿಯ ಶ್ರೀ ಚನ್ನಬಸವೇಶ್ವರ ದೇವಾಲಯ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವೈಟ್‌ಟಾಪಿಂಗ್ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.