ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಹೇಳಿಕೆ ಜನದಟ್ಟಣೆ ಹಾಗೂ ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ ಚಿತ್ರದುರ್ಗ: ನಗರದಲ್ಲಿ ಜರುಗುವ ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ ಮೆರವಣಿಗೆ ವೇಳೆ ಜನದಟ್ಟಣೆ ಹಾಗೂ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ, ಪೊಲೀಸ್, ಅಗ್ನಿಶಾಮಕ, ಗೃಹ ರಕ್ಷಕದಳ, ನಗರಸಭೆ, ಆರೋಗ್ಯ, ಸಾರಿಗೆ, ಬೆಸ್ಕಾಂ, ಎನ್.ಸಿ.ಸಿ, ಎನ್.ಎಸ್.ಎಸ್ ಹಾಗೂ ಸ್ವಯಂ ಸೇವಕರ ನಡುವೆ ಸಮನ್ವಯ ಅಗತ್ಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಹೇಳಿದರು.