ಭಟ್ಕಳ: ತಾಲೂಕಿನ ಮುಂಡಳ್ಳಿ ನೀರಗದ್ದೆ ಗ್ರಾಮದಲ್ಲಿ ಮಹಿಳೆಯೊ ಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮುಂಡಳ್ಳಿ ನಿವಾಸಿ ಸವಿತಾ ಸೋಮಯ್ಯ ನಾಯ್ಕ (32) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಕಿರುಕುಳ ತಾಳಲಾರದೇ ನನ್ನ ತಂಗಿಆತ್ಮಹತ್ಯೆ ಮಾಡಿಕೊಂಡಿದಾಳೆ ಎಂದು ಸವಿತಾಳ ಅಣ್ಣ ಮೋಹನ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ದೂರು ನೀಡಿದ್ದಾರೆ. ಗ್ರಾಮೀಣ ಠಾಣೆ ಸಿಪಿಐ ಮಂಜುನಾಥ ಲಿಂಗಾರೆಡ್ಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.