ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2025- 26 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ತಿಮ್ಮೇಗೌಡನದೊಡ್ಡಿ ಬಳಿ ಇರುವ ಎಚ್.ಎನ್.ಅನಂತಕುಮಾರ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆಯಿತು. ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಸಿ.ಚರಂತಿಮಠ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ತೇಜಸ್ವಿನಿ ಅನಂತಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.