ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಶಿಕ್ಷಣ ಅಳವಡಿಸಿಕೊಂಡ ದೇಶದ ಮೊಟ್ಟ ಮೊದಲ ತಾಲೂಕು ರಾಣೇಬೆನ್ನೂರು ತಾಲೂಕು ಆಗಲಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು. ತಾಲೂಕಿನ ಇಟಗಿ ಗ್ರಾಮದಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕಳೆದ ವರ್ಷ 100 ಸ್ಮಾರ್ಟ್ ಕ್ಲಾಸ್ ಗಳನ್ನು ಉದ್ಘಟಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ ಇನ್ನುಳಿದ 100 ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಗಳನ್ನು ವಿತರಿಸುವ ಯೋಜನೆಗೆ ರೌಂಡ್ ಟೇಬಲ್ ಆಫ್ ಇಂಡಿಯಾ ಸದಸ್ಯರೊಂದಿಗೆ ಇಂದು ಇಟಗಿಯಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು ಎಂದರು.