ಕಲಬುರಗಿ : ಸೆಪ್ಟೆಂಬರ್ 6 ರಂದು ಕಲಬುರಗಿ ನಗರದ ರಿಂಗ್ ರಸ್ತೆಯ ಟಿಪ್ಪು ಕಾಲೇಜು ಬಳಿ ರಿಯಲ್ ಎಸ್ಟೆಟ್ ಉದ್ಯಮಿ ಮಹ್ಮದ್ ಬಿಲಾಲ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರ ವಿರುದ್ಧ ಸಬ್ ಅರ್ಬನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.. ಸೆ7 ರಂದು ಮಧ್ಯಾನ 2 ಗಂಟೆಗೆ ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.. ಸಮೀರ್, ಸೋಹೆಲ್, ಟಿಪ್ಪು, ಬಿಸ್ಲೆರಿ ಹುಸೇನ್ ಸೇರಿದಂತೆ ನಾಲ್ವರ ವಿರುದ್ಧ ಸಬ್ ಅರ್ಬನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಹಂತಕರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ..