ವೃದ್ಧರೊಬ್ಬರು ಕುಸಿದುಬಿದ್ದು ಮೃತಪಟ್ಟ ಘಟನೆ ಪಟ್ಟಣದ ಖಾಸಗಿ ಲಾಡ್ಜ್ ನಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಸೌಕಯ್ಯ ಎಂಬವರು ಮೃತರು. ಇವರು ಖಾಸಗಿ ಲಾಡ್ಜ್ ಗೆ ಶೌಚಾಲಯಕ್ಕೆಂದು ಬಂದಿದ್ದ ವೇಳೆ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸದ್ಯ ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಯುಡಿಆರ್ ಕೇಸ್ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.