ಕೇಂದ್ರ ಸರ್ಕಾರ ಜಿಎಸ್ಟಿ ಇಳಿಕೆ ಮಾಡಿ ಬಡವರು, ರೈತರು ಹಾಗೂ ಮಧ್ಯಮ ವರ್ಗದ ಜನರ ನೆರವಿಗೆ ಧಾವಿಸಿದೆ ಎಂದು ಕೋಲಾರದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ ಆಚರಣೆ ಮಾಡಿದರು.ಕೋಲಾರದ ಬಿಜೆಪಿ ಕಚೇರಿ ಎದುರು ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ ಹಾಗೂ ಮಾಜಿ ಸಂಸದ ಎಸ್ ಮುನಿಸ್ವಾಮಿ ನೇತೃತ್ವದಲ್ಲಿ ಶನಿವಾರ ಸಂಭ್ರಮಾಚರಣೆ ನಡೆಸಿದರು.ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಡವರು, ರೈತರಿಗೆ ಅನುಕೂಲವಾಗುವಂತೆ ಜಿಎಸ್‌ಟಿ ಇಳಿಕೆ ಮಾಡಿ ಕ್ರಾಂತಿಕಾರಿ ಹೆಜ್ಜೆ ಇಟ್ಟಿದ್ದಾರೆ, ಎಲ್ಲ ಕ್ಯಾನ್ಸರ್ ಔಷಧಗಳು ಸೇರಿದಂತೆ 33 ಜೀವ ರಕ್ಷಕ ಔಷಧಗಳು, ವೈಯಕ್ತಿಕ ಆರೋಗ್ಯ ವಿಮೆ ಮತ್ತು ಜೀವವಿಮೆಗೆ ಸಂಪೂರ್ಣ ತೆರಿಗೆ ವಿನಾಯಿತಿ ಘೋಷಿಸಿದೆ ಎಂದ್ರು