ತಾಲೂಕಿನ ಕೆಂಚಲಗೂಡು ಗ್ರಾಮದ ಜೋಗ ನಾಯ್ಕ ಎಂಬುವರ ಮೇಕೆ ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕಿದೆ. ಶುಕ್ರವಾರ ಸಂಜೆ 5:30ರಲ್ಲಿ ಈ ಘಟನೆ ನಡೆದಿದ್ದು, ಈ ಮೇಕ ಸೇರಿದಂತೆ ಇದುವರೆಗೂ ಹತ್ತಕ್ಕೂ ಹೆಚ್ಚು ಮೇಕೆ ಹಾಗೂ ಜಾನುವಾರು ಮೇಲೆ ಚಿರತೆ ದಾಳಿ ಮಾಡಿದ್ದು, ಇದರಿಂದ ಸುತ್ತಮುತ್ತ ಜನ ವಸತಿ ಪ್ರದೇಶವಿರುವ ಕಾರಣಕ್ಕೆ ಜನ ಓಡಾಡಲು ಭಯಪಡುವಂತಾಗಿದೆ. ತಹಸಿಲ್ದಾರ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಅರಣ್ಯ ಸಿಬ್ಬಂದಿ ಚಿರತೆ ಸೆರೆಗೆ ಬೋನು ಇಟ್ಟಿದ್ದಾರೆ. ಅಲ್ಲದೆ ಸುತ್ತಮುತ್ತಲಿನ ಸ್ಥಳದಲ್ಲಿ ವ್ಯಾಪಕ ಕಾಡು ಬೆಳೆದಿದ್ದು