ಒಕ್ಕಲಿಗ ಸಮುದಾಯದ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ನಿಂದಿಸಿದ ಆಡಿಯೋ ವೈರಲ್ ಮಾಡಿರುವ ಕಾಂಗ್ರೆಸ್ ಮುಖಂಡ ಜಿ.ವಿ. ಸೀತಾರಾಂ ಅವರ ವಿರುದ್ದ ಎಚ್.ಡಿ. ಕೋಟೆ ಪಟ್ಟಣದಲ್ಲಿ ತಾಲೂಕು ಒಕ್ಕಲಿಗರ ಸಂಘದಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಗದ್ದಿಗೆ ಸರ್ಕಲ್ ಬಳಿಯಿಂದ ಸಾವಿರಾರು ಸಂಖ್ಯೆಯಲ್ಲಿ ಒಕ್ಕಲಿಗ ಸಮುದಾಯವರು ಕಾಂಗ್ರೆಸ್ ಮುಖಂಡನ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಬಾಪೂಜಿ ವೃತ್ತದಲ್ಲಿ ಅವರ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.