ಜೀವನದಲ್ಲಿ ಜಿಗುಪ್ಸೆಗೊಂಡ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಚಿಕ್ಕನಾಯಕನಹಳ್ಳಿ ತಾಲೂಕಿನ ಸಿದ್ದನಕಟ್ಟೆ ಗ್ರಾಮದಲ್ಲಿ ನಡೆದಿದೆ. ಗುರುವಾರ ಮಧ್ಯಾಹ್ನ ಸುಮಾರು 3 ರ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಸಿದ್ದನಕಟ್ಟೆ ಗ್ರಾಮದ ತಮ್ಮ ನಿವಾಸದಲ್ಲಿ ದೇವರಾಜು ನಾಗರತ್ನ ದಂಪತಿ ಪುತ್ರಿ 20 ವರ್ಷದ ಅಶ್ವಿನಿ ಸೀರೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ. ತುಮಕೂರು ಜಿಲ್ಲಾಸ್ಪತ್ರೆಯ ಪ್ಯಾರ ಮೆಡಿಕಲ್ ಕಾಲೇಜಿನಲ್ಲಿ ಕಳೆದ ಮಾರ್ಚ್ ನಲ್ಲಿ ಪ್ಯಾರಾಮೆಡಿಕ್ ಕೋರ್ಸ್ ಮುಗಿಸಿದ್ದ ಯುವತಿ ಅಶ್ವಿನಿ ಕೆಲಸ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳುವ ಸಮಯದಲ್ಲಿ ಈ ರೀತಿ ಆತ್ಮಹತ್ಯೆ ಗೆ ಶರಣಾಗಿದ್ದಾರೆ.