ತಾಲ್ಲೂಕಿನ ನಗರಘಟ್ಟ ಗ್ರಾಮದ ಸ.ಹಿ.ಪ್ರಾ.ಶಾಲೆಯಲ್ಲಿ ಶನಿವಾರ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಶಾಸಕ ಎಂ.ಚಂದ್ರಪ್ಪ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿ ಶಾಲೆಯ ಹೆಚ್ಚುವರಿ ಕೊಠಡಿಗಳ ಕಾಮಗಾರಿಯನ್ನು ಗುಣಮಟ್ಟದಿಂದ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷ ಅಜ್ಜಯ್ಯ, ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರವೀಣ್, ತಾಲ್ಲೂಕು ಪಂಚಾಯತ್ ಮಾಜಿವ ಸದಸ್ಯ ಪರಮೇಶ್ವರಪ್ಪ, ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಅಂಕಳಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಶ್ರೀನಿವಾಸ್ ಇದ್ದರು.