ಬಳ್ಳಾರಿ ತಾಲೂಕಿನ ಮೋಕಾ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇರುಮುಡಿ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮ ಮಾಜಿ ಸಚಿವ ಶ್ರೀರಾಮುಲು ಭಾಗಿಶನಿವಾರ ಬೆಳಿಗ್ಗೆ 10ಗಂಟೆಗೆಶ್ರದ್ಧಾ-ಭಕ್ತಿಯಿಂದ ವಿಜೃಂಭಣೆಯಿಂದ ಜರುಗಿತು.ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಶ್ರೀರಾಮುಲು ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು. ಕಳೆದ ಐದು ವರ್ಷಗಳಿಂದ ಇಲ್ಲಿ ನಿರಂತರವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲೆ ಬಿಜೆಪಿ ಅಧ್ಯಕ್ಷ ಶ್ರೀ ಅನಿಲ್ ನಾಯ್ಡು ಮೋಕಾ , ಶ್ರೀ ಬೆಸಗುಲ್ ರಾಮಪ್ಪ, ಶ್ರೀ ಶಶಿತಾಳ, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಶ್ರೀ ಹನುಮಂತಪ್ಪ , ಮುಂಡಾ ಮಾಜಿ ಅಧ್ಯಕ್ಷ ಶ್ರೀ ಮಾರುತಿ ಪ್ರಸಾದ್ ಸೇರಿದಂತೆ ಮತ್ತಿತರರು ಇದ್ದರು.