ಜೇವರ್ಗಿ ತಾಲೂಕು ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ ಹಾಗೂ ಶಿವಸೇನೆಯ ರಾಜ್ಯಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿಗೆ ಬಳ್ಳಾರಿ ಜಿಲ್ಲಾ ಪ್ರವೇಶ ನಿಷೇಧಿಸಿ ನೋಟಿಸ್ ಜಾರಿ ಮಾಡಲಾಗಿದೆ. ಬಳ್ಳಾರಿ ಜಿಲ್ಲೆ ಸಿರುಗುಪ್ಪದ ಹಿಂದೂ ಮಹಾಸಭಾದ ಧರ್ಮ ಸಭೆಯಲ್ಲಿ ಭಾಗವಹಿಸುವಂತೆ ಸ್ವಾಮೀಜಿಯವರಿಗೆ ಆಹ್ವಾನ ಬಂದಿತ್ತು. ಈ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾ ಸಹಾಯಕ ಆಯುಕ್ತರು ಶ್ರೀಗಳಿಗೆ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಬುದವಾರ 11 ಗಂಟೆಗೆ ಮಠಕ್ಕೆ ತೆರಳಿ ಪೊಲೀಸರು ನೋಟಿಸ್ ಶ್ರೀಗಳಿಗೆ ತಲುಪಿಸಿದ್ದಾರೆ ಎಂದು ತಿಳಿದುಬಂದಿದೆ...