ಬೈಂದೂರು ವಿಧಾನಸಭಾ ಕ್ಷೇತ್ರದ ಬೈಂದೂರು ತಾಲ್ಲೂಕು ಕೇಂದ್ರದಲ್ಲಿ ನಿರ್ಮಾಣವಾಗಿರುವ ಬೈಂದೂರು ಬಸ್ ನಿಲ್ದಾಣವನ್ನು ಶೀಘ್ರವಾಗಿ ಲೋಕಾರ್ಪಣೆ ಮಾಡಬೇಕೆಂದು ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರನ್ನು ಇಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.ಶಾಸಕರ ಮನವಿಗೆ ಸ್ಪಂದಿಸಿದ ಮಾನ್ಯ ಸಚಿವರು, ಶೀಘ್ರದಲ್ಲೇ ಲೋಕಾರ್ಪಣೆಗೈಯಲು ಅಧಿಕಾರಿಗಳಿಗೆ ಸೂಚನೆ ನೀಡಿ ತಾವೂ ಆಗಮಿಸುವುದಾಗಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.