ಮಡಿಕೇರಿ:ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರಾದ ಡಾ. ಶರಣ ಪ್ರಕಾಶ ಪಾಟೀಲ ರವರ ಅಧ್ಯಕ್ಷತೆಯಲ್ಲಿ ವಿಕಾಸ ಸೌಧ ದಲ್ಲಿ ಕಾರ್ಡಿಯಾಕ್ ಯೂನಿಟ್ ಸ್ಥಾಪಿಸುವ ಸಂಬಂಧ ಪರಿಶೀಲನಾ ಸಭೆಯಲ್ಲಿ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಸದಸ್ಯರಾದ ಡಾ ಮಂತರ್ ಗೌಡ ರವರು ಪಾಲ್ಗೊಂಡು ಯೋಜನೆ ಕಾರ್ಯಗತಗೊಳಿಸುವ ಸಂಭಂಧ ಸಚಿವರೊಂದಿಗೆ ಚರ್ಚಿಸಿ ಶೀಘ್ರವಾಗಿ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯುವ ಸಂಬಂಧ ಚರ್ಚಿಸಿದರು. ಮಾನ್ಯ ಸಚಿವರು ಯೋಜನೆ ಪ್ರಗತಿ ವಿವರವನ್ನು ಪರಿಶೀಲಿಸಿ ಅತ್ಯಾಧುನಿಕ ತಂತ್ರಜ್ಞಾನದ ಕ್ಯಾತ್ ಲ್ಯಾಬ್ ಸ್ಥಾಪಿಸುವ ಸಂಬಂಧ ಅಗತ್ಯ ಪ್ರಸ್ತಾವನೆಯನ್ನು ಶೀಘ್ರವಾಗಿ ಸಲ್ಲಿಸಿ ಟೆಂಡರ್ ಆಹ್ವಾನಿಸಲು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಿಸಿನ್, ಜಂ