ಮೊಳಕಾಲ್ಮುರು:-ಇಸ್ಲಾಂ ಧರ್ಮದ ಪ್ರವರ್ತಕ ಹಜರತ್ ಮೊಹಮ್ಮದ್ ಪೈಗಂಬರ್ ಅವರ ಜನ್ಮದಿನದ ಅಂಗವಾಗಿ ನಾಗಸಮುದ್ರ ಗ್ರಾಮದಲ್ಲಿ ಶುಕ್ರವಾರದಂದು ಈದ್ ಮಿಲ್ಲಾದ್ ಹಬ್ಬವನ್ನು ಸಮುದಾಯದ ಜನರು ಸಡಗರ ಸಂಭ್ರಮದಿಂದ ಆಚರಿಸಿದರು. ಹಬ್ಬದ ಪ್ರಯುಕ್ತ ಗ್ರಾಮದಲ್ಲಿ ಮಸೀದಿ,ದರ್ಗಾಗಳಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಪ್ರಾರ್ಥನೆ ನಡೆಯಿತು. ನಂತರ ಬಮಧ್ಯಾಹ್ನ 1ಗಂಟೆಗೆ ಗ್ರಾಮದಲ್ಲಿ ಸಾಮೂಹಿಕ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ನಾನಾ ಬಣ್ಣದ ಬಾವುಟಗಳನ್ನು ಹಿಡಿದು ಧರ್ಮದ ಪರ ಘೋಷಣೆಗಳನ್ನು ಕೂಗುತ್ತಾ ಅಪಾರ ಸಂಖ್ಯೆಯಲ್ಲಿ ಸಮುದಾಯ ಜನರು ಮೆರವಣಿಗೆಯಲ್ಲಿ ಪಾಲ್ಗೊಂಡರು.