ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ರೈತರ ಜೊತೆ ಅನುಚಿತವಾಗಿ ವರ್ತಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಾಮೂಹಿಕ ನಾಯಕತ್ವದ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಭುವನೇಶ್ವರಿ ವೃತ್ತದಲ್ಲಿ ಸಾಮೂಹಿಕ ನಾಯಕತ್ವದ ರೈತ ಸಂಘದ ಅಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಜಮಾಯಿಸಿದ ರೈತರು ರಾಷ್ಟ್ರೀಯ ಹೆದ್ದಾರಿ ತಡೆದು ಡಿ.ಕೆ.ಶಿವಕುಮಾರ್ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.