ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ವಿರುದ್ಧ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪ ಬಂದ ಬಳಿಕ ಶಿವಮೊಗ್ಗದಲ್ಲಿ ಬುಧವಾರ ಕುದ್ದು ರವಿಕುಮಾರ್ ಸುದ್ದಿಗೋಷ್ಠಿಯನ್ನು ನಡೆಸಿದ್ದಾರೆ. ನಿಗಮದಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪ ಬಂದಿದೆ. ನಾನು ಯಾವಾಗಲೂ ಕಚೇರಿಯಲ್ಲಿ ಇರುತ್ತಿದ್ದೆ. ಅಲ್ಲಿನ ವ್ಯವಸ್ಥೆ ಸರಿಪಡಿಸಲು ಪ್ರಯತ್ನಿಸಿದ್ದೆ. ನಾನು ನಿಗಮದ ಸೌಲಭ್ಯ ನೀಡಲು ಫಲಾನುಭವಿಗಳಿಂದ ಕಮಿಷನ್ ಕೇಳಿದ್ದೇನೆ ಎನ್ನುವ ಆ ವಿಡಿಯೋದಲ್ಲಿನ ಇಡೀ ಸಂಭಾಷಣೆಗೆ ಬೇರೆ ಧ್ವನಿ ನೀಡಲಾಗಿದೆ ಎಂದು ರವಿಕುಮಾರ್ ಹೇಳಿದ್ದಾರೆ.