ಧರ್ಮಸ್ಥಳದಲ್ಲಿ ಸತ್ಯಮೇವ ಜಯತೆ: ಹೊನ್ನಾಳಿಯಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಧರ್ಮಸ್ಥಳ ಪ್ರಕರಣದಲ್ಲಿ ಸತ್ಯಮೇವ ಜಯತೆ ಆಗಿದ್ದು, ಸುಜಾತಾ ಭಟ್ ತಪ್ಪೊಪ್ಪಿಕೊಂಡಿದ್ದಾರೆ. ಸಮೀರ್, ಗಿರೀಶ್ ಮಟ್ಟಣ್ಣನವರ್ ವಿರುದ್ಧ ಕಾನೂನು ಕ್ರಮ ತೆಗೆಕೊಳ್ಳಬೇಕು ಎಂದು ಮಾಜಿ ಸಚಿವ ರೇಣುಕಾಚಾರ್ಯ ಆಗ್ರಹಿಸಿದರು. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಧರ್ಮಸ್ಥಳ ಅಪಪ್ರಚಾರಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ಬಿಜೆಪಿ ವತಿಯಿಂದ ಶನಿವಾರ ಮಧ್ಯಾಹ್ನ 1 ಗಂಟೆಗೆ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಾಗ ಮೊದಲ ಧ್ವನಿ ಎತ್ತಿದ್ದು ನಾವು. ಈಗ ಸತ್ಯಮೇವ ಜಯತೆ ಆಗಿದೆ ಎಂದರು.