ಖಾಸಗಿ ಮಾರುಕಟ್ಟೆ ವಿರುದ್ಧ ಹುನ್ನಾರ ನಡೆಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯ ತರಕಾರಿ ಮಾರುಕಟ್ಟೆಯ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದರು. ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ರಾಜಕೀಯ ಒತ್ತಡಕ್ಕೆ ಮಣಿದು ಭೂ ಉಪಯೋಗ ಬದಲಾವಣೆ ಆದೇಶವನ್ನು ರದ್ದುಪಡಿಸಿದ್ದಾರೆ ಎಂದು ಆಗ್ರಹಿಸಿದರು. ಕಾನೂನು ಬದ್ಧವಾಗಿರುವ ಜೈ ಕಿಸಾನ್ ಖಾಸಗಿ ತರಕಾರಿ ಮಾರುಕಟ್ಟೆಯ ವ್ಯಾಪಾರಸ್ಥರು ಶನಿವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು ಮತ್ತು ತಮ್ಮ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು