ದಾಂಡೇಲಿ : ಸೆ.11 ರಂದು ನಾಳೆ ಗುರುವಾರ ಬೆಳಿಗ್ಗೆ 11:30 ಗಂಟೆಗೆ ಸರಿಯಾಗಿ ದಾಂಡೇಲಿ ತಾಲೂಕು ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ನಗರದ ಅಂಬೇವಾಡಿಯಲ್ಲಿರುವ ತಾಲೂಕು ಆಡಳಿತ ಸೌಧದ ಸಭಾಭವನದಲ್ಲಿ ಶಾಸಕ ಆರ್.ವಿ.ದೇಶಪಾಂಡೆ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಶೈಲೇಶ ಪರಮಾನಂದ ಅವರು ಇಂದು ಬುಧವಾರ ಸಂಜೆ 5:00 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿಯನ್ನು ನೀಡಿದ್ದಾರೆ. ನಗರದ 31 ವಾರ್ಡುಗಳು ಹಾಗೂ ತಾಲೂಕಿನ ಆಲೂರು, ಬಡಕಾನಶಿರಡಾ, ಅಂಬಿಕಾನಗರ ಮತ್ತು ಅಂಬೇವಾಡಿ ಹೀಗೆ ಒಟ್ಟು ನಾಲ್ಕು ಗ್ರಾ.ಪಂ ವ್ಯಾಪ್ತಿಯಲ್ಲಿ ಒಳಪಡುವ ವಿಧವಾ, ಅಂಗವಿಕಲ, ಸಂದ್ಯಾ ಸುರಕ್ಷಾ, ಇಂದಿರಾ ಗಾಂಧಿ ವೃದ್ಧಾಪ್ಯ ವೇತನ, ಮನಸ್ವಿನಿ ಯೋಜನೆಯಡಿಯಲ್ಲಿ ತಾಂತ್ರಿಕ ದೋಷಗಳನ್ನು ಸರಿಪಡಿಸಲು ಅವಕಾಶವಿದೆ ಎಂದರು.