ದಯಮಾಡಿ ನನಗೆ ವಿಷ ಕೊಡಿ ಎಂದು ನಟ ದರ್ಶನ್ ನ್ಯಾಯಾಧೀಶರ ಮುಂದೆ ಮನವಿ ಮಾಡಿದ್ದಾರೆ. ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗಿ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಸೇರಿ ಇನ್ನಿತರ ಆರೋಪಿಗಳನ್ನು ರಾಜ್ಯದ ಇತರೆ ಕಾರಾಗೃಹಗಳಿಗೆ ವರ್ಗಾವಣೆ ಮಾಡುವಂತೆ ಪ್ರಾಸಿಕ್ಯೂಷನ್ ಅರ್ಜಿ ಸಲ್ಲಿಸಿತ್ತು. ಜೊತೆಗೆ ಹೆಚ್ಚುವರಿ ಹಾಸಿಗೆ ಹಾಗೂ ದಿಂಬು ನೀಡುವಂತೆ ದರ್ಶನ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಯ ವಿಚಾರಣೆ ಮಂಗಳವಾರ ಬೆಂಗಳೂರಿನ 64ನೇ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಿತು. ಈ ವಿಚಾರಣೆ ಸಂದರ್ಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಪ್ಪನ ಅಗ್ರಹಾರದಿಂದ ಹಾಜರಾದ ದರ್ಶನ್, ನನಗೆ ದಯಮಾಡಿ ವಿಷ ನೀಡಿ. ಬಿಸಿಲು ನೋಡಿ ಬಹಳ ದಿನವಾಗಿದೆ. ಬಟ್ಟೆಗಳು ವಾಸನೆ ಬರುತ್ತಿವೆ. ಫಂಗಸ್‌ನಿಂದಾಗಿ ಇಲ್ಲಿ ಬದುಕಲು ಆಗುತ್