ಒಳಾಂಗಣ ಕ್ರೀಡಾಂಗಣಕ್ಕೆ ಡಾ.ರಾಜಕುಮಾರ್ ಹೆಸರನ್ನು ನಾಮಕರಣ ಮಾಡುವಂತೆ ಅಪರ ಜಿಲ್ಲಾಧಿಕಾರಿಗೆ ಮನವಿ ಕೋಲಾರ ನಗರದ ಸರ್ಕಾರಿ ಜ್ಯೂನಿಯರ್ ಕಾಲೇಜು ಆಟದ ಮೈದಾನ ಪಕ್ಕದ ಮಿನಿ ಕ್ರೀಡಾಂಗಣದಲ್ಲಿ ನಿರ್ಮಾಣವಾಗಿರುವ ಜಿಲ್ಲಾ ಒಳಾಂಗಣ ಕ್ರೀಡಾಂಗಣಕ್ಕೆ ಕರ್ನಾಟಕ ರತ್ನ, ಯೋಗ ಸಾಧಕ ಡಾ.ರಾಜಕುಮಾರ್ ಹೆಸರನ್ನು ನಾಮಕರಣ ಮಾಡುವಂತೆ ಡಾ. ರಾಜಕುಮಾರ್ ನಾಮಕರಣ ಹೋರಾಟ ಸಮಿತಿ ಹಾಗೂ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಬುಧವಾರ ಸಂಜೆ ೫;೩೦ ರಲ್ಲಿ ಅಪರ ಜಿಲ್ಲಾಧಿಕಾರಿ ಮಂಗಳ ರವರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು. ಮನವಿ ಪತ್ರ ನೀಡಿ ಮಾತನಾಡಿದ ಡಾ. ರಾಜಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಕೋನಾ.ಪ್ರಭಾಕರ್, ಕನ್ನ