ಹಾಸನ :ನಗರದ ಸದಾಶಿವ ನಗರದ ಮನೆಯಲ್ಲಿ ಬರೋಬ್ಬರಿ ಅಂದಾಜು ಒಂದು ಕೆಜಿ ಚಿನ್ನ, 15 ಲಕ್ಷಕ್ಕೂ ಹೆಚ್ಚು ನಗದನ್ನು ದೋಚಿ ಕಳ್ಳರು ಪರಾರಿಯಾಗಿದ್ದಾರೆ.ಖಾಸಗಿ ಬ್ಯಾಂಕ್ ಉದ್ಯೋಗಿ ನವೀನ್ ಎಂಬುವರ ಮನೆಯಲ್ಲಿ ಈ ಕೃತ್ಯ ನಡೆದಿದ್ದು, ವರಮಹಾ ಲಕ್ಷ್ಮಿ ಹಬ್ಬಕ್ಕೆಂದು ಬ್ಯಾಂಕ್ ಲಾಕರ್ ನಿಂದ ಕೋಟ್ಯಂತರ ರೂ. ಬೆಲೆ ಬಾಳುವ ಚಿನ್ನ ಬೆಳ್ಳಿ ಆಭರಣಗಳನ್ನು ಮನೆಗೆ ತರಲಾಗಿತ್ತು.ಶುಕ್ರವಾರ ರಾತ್ರಿ ಮನೆಗೆ ಬೀಗ ಹಾಕಿ ಇಡೀ ಕುಟುಂಬ ಹೊರ ಹೋಗಿತ್ತು. ಇಂದು ಬೆಳಿಗ್ಗೆ 8 ಗಂಟೆಗೆ ಮನೆಗೆ ಬಂದು ನೋಡಿದಾಗ ಕಳ್ಳತನ ನಡೆದಿರುವುದು ಗೊತ್ತಾಗಿದೆ.ಮನೆಯ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು, ನಗದು ಹಾಗೂ ಚಿನ್ನಾಭರಣ ದೋಚಿ ಎಸ್ಕೆಪ್ ಆಗಿದ್ದಾರೆ. ಪತ್ನಿ ತಾಯಿಯ ಮನೆಯಲ್ಲೇ ನವೀನ್ ಕುಟುಂಬ ಸಮೇತರಾ