ಗಣೇಶ ಮತ್ತು ಈದ್ ಮಿಲಾದ್ ಹಬ್ಬ : ಡಿ.ಜೆ ಸಿಸ್ಟಂ ನಿಷೇಧ. ಚಿತ್ರದುರ್ಗ :-ಸೆ.02: ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಪೂರ್ಣಗೊಳ್ಳುವವರೆವಿಗೂ ಡಿ.ಜೆ ಸೌಂಡ್ ಸಿಸ್ಟಂ, ಹೆಚ್ಚಿನ ಶಬ್ಧ ಹೊರ ಸೂಸುವ ಧ್ವನಿವರ್ಧಕಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ ಆಗಸ್ಟ್ 27ರಂದು ಹಿಂದೂ ಬಾಂಧವರು ಒಟ್ಟು 1,744 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು, ವಿವಿಧ ದಿನಾಂಕಗಳಂದು ವಿಸರ್ಜನೆ ಮಾಡಲಿದ್ದಾರೆ. ಸೆ.15 ರವರೆಗೆ ಒಟ್ಟು 20 ದಿನಗಳ ಕಾಲ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಮೆರವಣಿಗೆ ಮೂಲ