ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮರಿ ಸಾವನ್ನಪ್ಪಿರುವ ಘಟನೆ ಸೊರಬ ತಾಲ್ಲೂಕಿನ ಅವಲುಗೋಡು ಗ್ರಾಮದ ಬಳಿ ಗುರುವಾರ ಬೆಳಗಿನ ಜಾವ 4 ಗಂಟೆಗೆ ಸಂಭವಿಸಿದೆ. ತಾಲ್ಲೂಕಿನ ಅವಲುಗೋಡು ಬಳಿ ಚಿರತೆ ರಾತ್ರಿ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿಯೊಡೆದು ಸ್ಥಳದಲ್ಲೇ ಸಾವನ್ನಪ್ಪಿದೆ. ಅಂದಾಜು ಏಳು ತಿಂಗಳ ಹೆಣ್ಣು ಚಿರತೆ ಮರಿ ಸಾವಿಗೀಡಾಗಿದೆ. ವಿಷಯ ತಿಳಿದ ತಕ್ಷಣವೇ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಮರೋಣತ್ತರ ಪರೀಕ್ಷೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ವಾಹನ ಸವರಾರು ರಾತ್ರಿ ವೇಳೆ ಅರಣ್ಯ ಪ್ರದೇಶದ ರಸ್ತೆಯಲ್ಲಿ ಸಂಚರಿಸುವಾಗ ಮುಂಜಾಗೃತೆ ವಹಿಸಬೇಕು ಆರ್ ಎಫ್ ಒ ತಿಳಿಸಿದ್ದಾರೆ.