ಗಣೇಶ ಚತುರ್ಥಿ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶದ ಮೇರೆಗೆ ನಗರದಲ್ಲಿ ಆಗಸ್ಟ್ 25, ಸೋಮವಾರ ಸಂಜೆ 6 ಗಂಟೆಗೆ ಪೊಲೀಸ್ ಪಥ ಸಂಚಲನ ನಡೆಯಿತು.ನಗರದ ಪೊಲೀಸ್ ಠಾಣಾ ಆವರಣದಿಂದ ಪಥ ಸಂಚಲನ ಆರಂಭವಾಗಿ ಅಂಬೇಡ್ಕರ್ ಸರ್ಕಲ್, ಮೇನ್ ರೋಡ್ ಮೂಲಕ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಪೊಲೀಸ್ ಠಾಣೆಗೆ ತಲುಪಿ ಮುಕ್ತಾಯಗೊಂಡಿತು.ತಾಲೂಕಿನಲ್ಲಿ ಗಣೇಶ ಹಬ್ಬವನ್ನು ಯಾವುದೇ ರೀತಿಯ ಅನಾಹುತಗಳು ಆಗದಂತೆ ಶಾಂತಿಯುತವಾಗಿ ಆಚರಿಸಬೇಕು. ಈ ಕಾರಣದಿಂದ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪಥಸಂಚಲನ ನಡೆಸಲಾಯಿತು.ಗಣೇಶ ಮೂರ್ತಿ ಮೆರವಣಿಗೆ ಮತ್ತು ಮೂರ್ತಿ ವಿಸರ್ಜಿಸುವ ಸಮ