ದೈನಂದಿನ ಜೀವನದಲ್ಲಿ ಕ್ರೀಡೆಗಳು ಶಾರೀರಿಕ ಆರೋಗ್ಯದ ಅವಿಭಾಜ್ಯ ಅಂಗವಾಗಿವೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಗ್ರೇಸಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟಿçÃಯ ಕ್ರೀಡಾ ದಿನ ಅಂಗವಾಗಿ ಶುಕ್ರವಾರ ಬೆಳಿಗ್ಗೆ 11ಗಂಟಗೆ ಆಯೋಜಿಸಲಾಗಿದ್ದ ಬಳ್ಳಾರಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗಳು ಅತ್ಯಾವಶ್ಯಕವಾಗಿದೆ. ಕ್ರೀಡೆಗಳು ನಮ್ಮ ಜೀವನವನ್ನು ಸಮೃದ್ಧಗೊಳಿಸುತ್ತವೆ. ಕ್ರೀಡೆಗಳಲ್ಲಿ ಸೋಲು-ಗೆಲುವು ಸಾಮಾನ್ಯ. ಯುವಪೀಳಿಗೆಯು