ರಾಜ್ಯ ಸರಕಾರ ಯೋಜನೆಯಡಿ ಕೊಳವೆಬಾವಿ ಕೊರೆಯಲು ಲಂಚ ಪಡೆದ ಆರೋಪದಲ್ಲಿ ಪೆರುವಾಯಿ ಗ್ರಾಪಂ ಅಧ್ಯಕ್ಷೆ ಮತ್ತು ಬಿಲ್ ಕಲೆಕ್ಟರ್ ಮಂಗಳೂರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ಸಂಜೆ ನಡೆದಿದೆ. ಪೆರುವಾಯಿ ಗ್ರಾಪಂ ಅಧ್ಯಕ್ಷೆ ನಫೀಸಾ ಮತ್ತು ಗ್ರಾಪಂ ಬಿಲ್ ಕಲೆಕ್ಟರ್ ವಿಲಿಯಂ ಎಂಬವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಮಂಗಳೂರು ವಿಭಾಗದ ಪ್ರಕಟನೆ ತಿಳಿಸಿದೆ.