Download Now Banner

This browser does not support the video element.

ರಾಯಚೂರು: ನಿವೇಶನಗಳ ನೀಡುವಂತೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ರಾಯಚೂರ ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಪ್ರತಿಭಟನೆ

Raichur, Raichur | Sep 9, 2025
ನಿವೇಶನಗಳನ್ನು ನೀಡುವಂತೆ ಆಗ್ರಹಿಸಿ ರಾಯಚೂರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮಂಗಳವಾರ ಮಧ್ಯಾನ ರಾಯಚೂರ ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಹೋರಾಟಗಾರರು, ಸರ್ವೆ ನಂಬರ್ 581 929/2 ಮತ್ತು 726 ಹಾಗೂ 727ರಲ್ಲಿ ಭೂಮಿ ಅಭಿವೃದ್ಧಿಪಡಿಸಿ ನಿವೇಶನ ಹಂಚಿಕೆ ಮಾಡುವಂತೆ ಆಗ್ರಹಿಸಿದರು.ನೀಡದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಾಗ ಕೊಡಿ ಇಲ್ಲ ವಿಷ ಕೊಡಿ ಎನ್ನುವ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
Read More News
T & CPrivacy PolicyContact Us