ಕೆನರಾ ಬ್ಯಾಂಕ್ ವತಿಯಿಂದ ವಿದ್ಯಾರ್ಥಿನಿಯರಿಗೆ ಸ್ಕಾಲರ್ ಶಿಪ್ ನೀಡುವ ಘೋಷಣೆಯನ್ನು ಆ. 27ರಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಘೋಷಿಸಲಾಯಿತು. ಮುದ್ದೇನಹಳ್ಳಿಯಲ್ಲಿರುವ ಸಾಯಿಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆನರಾಬ್ಯಾಂಕ್ ಅಧಿಕಾರಿಗಳನ್ನು ಸನ್ಮಾನಿಸಿ, ಸಿಎಸ್ಆರ್ ಸರ್ಕಲ್ ಆಫ್ ಹಾನರ್ ಎಂಬ ಬಿರುದನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯನಾರಾಯಣ ರಾಜು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 60 ಸಾವಿರ ವಿದ್ಯಾರ್ಥಿಯರಿಗೆ ಸ್ಕಾಲರ್ ಶಿಪ್ ನೀಡುವುದಾಗಿ ಘೋಷಿಸಿದರು.