ಯಲ್ಲಾಪುರ: ಪಟ್ಟಣದ ಉರ್ದು ಶಾಲಾ ಆವರಣದಲ್ಲಿ ಮೌಲಾನಾ ಆಜಾದ್ ಮಾದರಿ ಶಾಲೆಯ ಶೈಕ್ಷಣಿಕ ಕಾರ್ಯಚಟುವಟಿಕೆಗಳಿಗೆ ಶಾಸಕ ಶಿವರಾಮ ಹೆಬ್ಬಾರ್ ಚಾಲನೆ ನೀಡಿಮಾತನಾಡಿ ಗುಣಮಟ್ಟದ ಶಿಕ್ಷಣವು ಸಮಾಜದ ಪ್ರಗತಿಗೆ ಬುನಾದಿಯಾಗಿದ್ದು, ಮೌಲಾನಾ ಆಜಾದ್ ಅವರ ಶಿಕ್ಷಣ ದೃಷ್ಟಿಕೋನ ಇಂದು ಕೂಡ ಪ್ರಸ್ತುತವಾಗಿದೆ. ಯಲ್ಲಾಪುರದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸೌಲಭ್ಯ ಒದಗಿಸಲು ನಾವು ಸದಾ ಬದ್ಧರಾಗಿದ್ದೇವೆ ಎಂದರು ಈ ಸಂದರ್ಭದಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ರೇಖಾ ನಾಯ್ಕ, ಪ ಪಂ ಅಧ್ಯಕ್ಷೆ ನರ್ಮದಾ ನಾಯ್ಕ, ಉಪಾಧ್ಯಕ್ಷ ಅಮಿತ್ ಅಂಗಡಿ ಸದಸ್ಯರು, ಜಿ ಪಂ ಮಾಜಿ ಸದಸ್ಯ ವಿಜಯ ಮಿರಾಶಿ, ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.