ರಾಜ್ಯ ಸರ್ಕಾರದ ವಿರುದ್ಧ ಪಡಿತರ ವಿತರಕರು ಅಸಮಾಧಾನ ವ್ಯಕ್ತಪಡಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೋರಾಟ ನಡೆಸಲು ನಿರ್ಧರಿಸಿದರು. ಮಂಡ್ಯದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಟಿ. ಕೃಷ್ಣಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಚರ್ಚಿಸಿದರು. ಪಡಿತರ ವಿತರಕರ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಿ ವಿತರಕರು, ಪಡಿತರ ಸಾಮಗ್ರಿ ಹೆಚ್ಚಳ, ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಬಾಕಿ ಇರುವ ಹೆಚ್ಚುವರಿ ಕಮೀಷನ್ ಸಂದಾಯ, ಅನ್ನಭಾಗ್ಯ ಸಹಾಯಧನ, ಸರಿಯಾದ ಸಮಯಕ್ಕೆ ಪಡಿತರ ವಿತರಣೆ, ತೂಕದಲ್ಲಿ ವ್ಯತ್ಯಾಸ ಸೇರಿ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಬೃಹತ್ ಹೋರಾಟಕ್ಕೆ ಕರೆ ನೀಡಿದರು. ಸಭೆಯಲ್ಲಿ ಜಿಲ್ಲಾಧ್ಯಕ್ಷ ರಾಜಣ್ಣ, ಚಂದ್ರು ಹಾಜರಿದ್ದರು.