ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆ ಮಾಡುವ ಸಿಬ್ಬಂದಿಗಳಿಗೆ ಆಪ್ ಓಪನ್ ಆಗುತ್ತಿಲ್ಲ ಮತ್ತು ಸರಿಯಾಗಿ ಓಟಿಪಿ ಬರುತ್ತಿಲ್ಲ ಎಂದು ಗೊಂದಲಕ್ಕೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾನ ಮೂರು ಗಂಟೆಯ ಸುಮಾರಿಗೆ, ಸಮೀಕ್ಷೆಯ ಸಿಬ್ಬಂದಿಗಳು ತಮ್ಮ ಸಮಸ್ಯೆಯನ್ನು ಬಗೆಹರಿಸಿ ಎಂದು ಕೊಪ್ಪಳ ತಹಸಿಲ್ದಾರ್ ಕಚೇರಿಯ ಆಗಮಿಸಿ ಹಿರಿಯ ಅಧಿಕಾರಿಗಳ ಎದುರು ತಮ್ಮ ಗೋಳನ್ನ ತೋಡಿಕೊಂಡಿದ್ದಾರೆ. ಸಮಸ್ಯೆಯನ್ನ ಬಗೆಹರಿಸದೆ ಹೋದಲ್ಲಿ ಸಮೀಕ್ಷೆಯನ್ನು ನಡೆಸಲು ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಹಿರಿಯ ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದಾರೆ.