ರಾಯಚೂರು ಗ್ರಾಮೀಣ ಭಾಗದಲ್ಲಿರುವ ತುಂಗಭದ್ರಾ ನದಿಯಲ್ಲಿ ದೇವಪ್ಪ ಎನ್ನುವ ಮೀನುಗಾರನು ತೆಪ್ಪದಲ್ಲಿ ತೆರಳಿ ಮೀನು ಹಿಡಿಯುವ ಸಂದರ್ಭದಲ್ಲಿ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಇಬ್ಬರು ಮೀನುಗಾರರು ಬೇರೆ ಬೇರೆ ಕಡೆಗಳಲ್ಲಿ ಮೀನು ಹಿಡಿಯುವ ಸಂದರ್ಭದಲ್ಲಿ ಸಂಜೆಯ ವೇಳೆಯ ಮಳೆ ಗಾಳಿ ಸಂದರ್ಭದಲ್ಲಿ ಸಿಡಿಲು ಬಡಿದು ತೆಪ್ಪದಲ್ಲಿಯೇ ಬಿದ್ದು ಸಾವನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಕುಟುಂಬಸ್ಥರು ಆಗಮಿಸಿ ಶವವನ್ನು ಕಂಡು ಆಕ್ರಂದನ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಯರಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.