ಚಿತ್ರದುರ್ಗದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ರಾಜ್ಯ ಮಟ್ಟದ ಕೊರವ ಜನಾಂಗದ ಸಮಾವೇಶ ಹಾಗೂ ಶಿವಶರಣ ಶ್ರೀ ನುಲಿಯ ಚಂದಯ್ಯನವರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶನಿವಾರ ಸಂಜೆ 4 ಗಂಟೆಗೆ ಚಿತ್ರದುರ್ಗ ಜಿಲ್ಲಾ ಕೊರಮ ಜನಾಂಗದ ಕ್ಷೇಮಾಭಿವೃದ್ದಿ ಸಂಘದ ಆಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಹಿಂದುಳಿದ ವರ್ಗ ಹಾಗೂ ಕನ್ನಡ ಸಂಸ್ಕಂತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ್ದು ಖೂರವ ಸಮಾಜಕ್ಕೂ ಸಹಾ ಅಭೀವೃದ್ದಿ ನಿಗಮವನ್ನು ಸ್ಥಾಪನೆ ಮಾಡುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಲಾಗುವುದು ಈ ನಿಗಮ ಆದರೆ ನಿಮ್ಮ ಸಮಾಜದ ಆಭೀವೃದ್ದಿಯೂ ಸಹಾ ಆಗಲಿದೆ ಎಂದು ಶಿವರಾಜ್ ತಂಗಡಗಿ ತಿಳಿಸಿದರು.