ನಾಡಹಬ್ಬ ದಸರಾ ಉದ್ಘಾಟನೆಗೆ ಸಾಹಿತಿ ಭಾನುಮುಷ್ತಾಕ್ ಆಹ್ವಾನ ವಿರೋಧಿಸಿ ಇಂದು ಮಂಡಲ ಬಿಜೆಪಿ ಪ್ರತಿಭಟನೆ ನಡೆಸಿತು.ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭ ಮಾಜಿ ಸಚಿವ ಅಪ್ಪಚ್ಚು ರಂಜನ್ ಮಾತನಾಡಿ ಸಿದ್ದರಾಮಯ್ಯನವರ ಸರ್ಕಾರ ದಸರಾ ಉದ್ಘಾಟನೆಗೆ ಕನ್ನಡ ವಿರೋಧಿ ಭಾನು ಮುಷ್ತಾಕ್ ರವರನ್ನು ಆಹ್ವಾನಿಸುವ ಮೂಲಕ ಈ ನಾಡಿನ ಅಸಂಖ್ಯಾತ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ನಾಡದೇವತೆ ಚಾಮುಂಡೇಶ್ವರಿ ದೇವಾಲಯ ಹಿಂದೂಗಳದಲ್ಲಾ ಎನ್ನುವ ಮೂಲಕ ಈ ನಾಡಿಗೆ ಹಾಗೂ ರಾಜಮನೆತನಕ್ಕೆ ಅಗೌರವ ತೋರಿದ