ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಎಚ್ಐವಿ ಜಾಗೃತಿ ಜಾಥಾಕ್ಕೆ ವಿಜಯಪುರ ನಗರದಲ್ಲಿ ಶುಕ್ರವಾರ ಸಾಯಂಕಾಲ 5ಗಂಟೆ ಸುಮಾರಿಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆನ್ನೂರ್ ಚಾಲನೆ ನೀಡಿದರು. ನಗರದ ಸಿದ್ದೇಶ್ವರ ದೇವಸ್ಥಾನದಿಂದ ಆರೋಗ್ಯ ಇಲಾಖೆ ವರೆಗೂ ಜಾಗೃತಿ ಜಾಥಾವು ಜರುಗಿತು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಎಚ್ಐವಿ ಜಾಗೃತಿಯ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಜಾಗೃತಿ ಜಾತಕದಲ್ಲಿ ಭಾಗಿಯಾಗಿದ್ದರು.