ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ದಲಿತ ಕಾರ್ಮಿಕರ ಅಸಂಘಟಿತ ಒಕ್ಕೂಟ ಸದಸ್ಯರು ಹಾಗೂ ಮಾದಿಗ ಸಮುದಾಯ ಜನರು ಪ್ರತಿಭಟನೆಯನ್ನು ನಡೆಸಿದರು. ಧಾರವಾಡ ಕಡಪಾ ಮೈದಾನದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿಯವರೆಗೆ ಅಣಕು ಶವಯಾತ್ರೆ ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಿದರು. ಸುಪ್ರೀಂ ಕೋರ್ಟ್ ಒಂದು ವರ್ಷಗಳ ಹಿಂದೆಯೇ ಪರಿಶಿಷ್ಟ ಜಾತಿ ಒಳ ಮೀಸಲಾತಿ ನೀಡುವಂತೆ ತೀರ್ಪು ನೀಡಿದೆ ಎಂದು ಪ್ರತಿಭಟಿಸಿದರು.