ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಎರಡು ಕಾರುಗಳ ನಡುವೆ ನಡೆದಿದ್ದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಹುಯಿಲು ಗ್ರಾಮದ 25 ವರ್ಷದ ಯುವಕ ಅಕ್ಷಯ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಕಾರುಗಳು ಒಂದಕ್ಕೊಂದು ಡಿಕ್ಕಿಯಾದ ರಭಸಕ್ಕೆ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು. ಅಕ್ಷಯ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಘಟನೆ ಕುರಿತು ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.