ಮಾಗಡಿ ಪಟ್ಟಣದಲ್ಲಿ ಗಾಂಧಿ ಪ್ರತಿಮೆ ಸ್ಥಳಾಂತರ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಜೆಡಿಎಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ಗಾಂಧಿ ಪ್ರತಿಮೆಯನ್ನ ಸ್ಥಳಾಂತರ ಮಾಡಲಾಗುತಿತ್ತು. ಇದನ್ನ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆ ತೀವ್ರ ಗೊಳ್ಳುತ್ತಿದಂತೆ ಎಚ್ಚೆತ್ತ ಪೊಲೀಸರು ಪ್ರತಿಭಟನಾಕಾರರನ್ನ ವಶಕ್ಕೆ ಪಡೆದುಕೊಂಡರು.