ಮಲ್ಲೇಶ್ವರದಲ್ಲಿರುವ ತಮ್ಮ ಕಚೇರಿಯಲ್ಲಿ ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನಾಗರಿಕರ ಅಹವಾಲುಗಳನ್ನ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಆಲಿಸಿದರು. ಬಂದಂತ ಎಲ್ಲಾ ಸಾರ್ವಜನಿಕರ ಸಮಸ್ಯೆಗಳನ್ನ ಆಲಿಸಿದ ಶೋಭಾ ಕರಂದ್ಲಾಜೆ ಅವರು, ಅಧಿಕಾರಿಗಳ ಜೊತೆ ಪೋನ್ ಮೂಲಕ ಮಾತನಾಡಿ ಬಗೆ ಹರಿಸಿಕೊಟ್ಟರು. ಕೆಲವು ಸಮಸ್ಯೆಗಳನ್ನ ಶೀಘ್ರ ಪರಿಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.